ಶನಿವಾರ, ಮೇ 15, 2021
29 °C

ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಜೋರು ಮಳೆ ಸುರಿಯುತ್ತಿದೆ.

ನಗರದಲ್ಲಿ ಕೆಲ ದಿನಗಳಿಂದ ಬಿಸಿಲು ಹೆಚ್ಚಿತ್ತು. ಆಗಾಗ ಮೋಡ ಕವಿದ ವಾತಾವರಣವೂ ಕಂಡುಬಂದಿತ್ತು. ಮಂಗಳವಾರ ಸಂಜೆ 5ರ ನಂತರ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿದೆ. 

ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ, ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ಸುತ್ತಮುತ್ತ  ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿದೆ.

ಹಲವೆಡೆ ಕಾಮಗಾರಿಗಳು ನಡೆಯುತ್ತಿದ್ದು, ಅದೇ ಸ್ಥಳದಲ್ಲಿ ರಸ್ತೆ ಮೇಲೆಯೇ ನೀರು ಹರಿಯುತ್ತಿದೆ. ಅದರಲ್ಲೇ ವಾಹನಗಳು ಸಂಚರಿಸುತ್ತಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು