ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಗಾಳಿ ಸಹಿತ ಮಳೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Published 2 ಜೂನ್ 2023, 16:20 IST
Last Updated 2 ಜೂನ್ 2023, 16:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಒಳನಾಡಿನಲ್ಲಿ ಗಾಳಿಯು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ. ಅಲ್ಲದೇ ಮುಂದಿನ 24 ಗಂಟೆಯಲ್ಲಿ ಕರಾವಳಿ ಭಾಗದಲ್ಲಿ ಬಿರುಗಾಳಿಯು 40ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿಯೂ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆಯ ಅವಧಿಯಲ್ಲಿ ಬಾಗಲಕೋಟೆಯ ಮಹಾಲಿಂಗಪುರ, ಬೆಳಗಾವಿಯ ಅಥಣಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗದ ಹಿರಿಯೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ರಾಯಚೂರಿನ ಕುರ್ಡಿ, ಚಿತ್ರದುರ್ಗದ ಪರುಶುರಾಂಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT