ಮಂಗಳವಾರ, ಅಕ್ಟೋಬರ್ 20, 2020
21 °C

ಜೋರು ಮಳೆ: ಸಿಡಿಲಿನ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಲ ಪ್ರದೇಶಗಳಲ್ಲಿ ಗುಡುಗು–ಸಿಡಿಲು ಸಹಿತವಾಗಿ ಶುಕ್ರವಾರ ಮಧ್ಯಾಹ್ನ ಜೋರು ಮಳೆ ಸುರಿಯಿತು.

ನಗರದ ಬಹುತೇಕ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಸುರಿಯಲಾರಂಭಿಸಿತು. ಕೆಲವೆಡೆ ಜೋರು ಮಳೆ ಇದ್ದರೆ, ಇನ್ನು ಹಲವೆಡೆ ಜಿಟಿ ಜಿಟಿ ಮಳೆ ಇತ್ತು.

ಬಾಣಸವಾಡಿ, ನಾಗಾವರ, ಹೆಣ್ಣೂರು, ಮಲ್ಲೇಶ್ವರ, ಆರ್‌.ಟಿ.ನಗರ, ಹೆಬ್ಬಾಳ, ಸಂಜಯನಗರ, ಪೀಣ್ಯ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಿತ್ತು. ರಾಜಾಜಿನಗರ, ಬಸವೇಶ್ವರ ನಗರ, ವಿಜಯನಗರ ಹಾಗೂ ಸುತ್ತಮುತ್ತ ಕಡಿಮೆ ಪ್ರಮಾಣದಲ್ಲಿ ಮಳೆಯಾಯಿತು.

’ನಗರದ ಪೂರ್ವ, ದಕ್ಷಿಣ ಭಾಗದಲ್ಲಿ ಮಾತ್ರ ಮಧ್ಯಾಹ್ನ ಜೋರು ಮಳೆಯಾಗಿದೆ. ಗಾಳಿಯೂ ವೇಗವಾಗಿ ಬೀಸಿದೆ. ಮರದ ಕೊಂಬೆಗಳು ಬಿದ್ದಿರುವ ಹಾಗೂ ರಸ್ತೆಯಲ್ಲಿ ನೀರು ನಿಂತ ಬಗ್ಗೆ ದೂರುಗಳು ಬಂದಿದ್ದವು’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು