ಸಂಚಾರ ದಟ್ಟಣೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ

7
‘ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ’

ಸಂಚಾರ ದಟ್ಟಣೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ

Published:
Updated:

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿಯಂತ್ರಿಸಲು ವಿಫಲರಾಗುತ್ತಿರುವ ಪೊಲೀಸರ ಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸ್ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಬೆಂಗಳೂರು ಕಮಿಷನರ್‌ ಟಿ.ಸುನೀಲ್‌ಕುಮಾರ್‌ ಹಾಗೂ ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಸಂಚಾರ) ಆರ್‌.ಹಿತೇಂದ್ರ ಅವರಿಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ, ‘ದಟ್ಟಣೆ ನಿಯಂತ್ರಣಕ್ಕೆ ಏನು ಕ್ರಮ ಕೈಗೊಂಡಿದ್ದೀರಾ’ ಎಂದು ಪ್ರಶ್ನಿಸಿದರು.

‘ಇತ್ತೀಚೆಗೆ ನಗರಕ್ಕೆ ಬಂದಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಟ್ಟಣೆಯಲ್ಲಿ ಸಿಲುಕಿದ್ದರು. ನಡೆದುಕೊಂಡೇ ವಿಧಾನಸೌಧಕ್ಕೆ ಬಂದರು. ಆ ರೀತಿಯಾದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುವುದಿಲ್ಲವೇ‘ ಎಂದು ಕೇಳಿದರು. ಅದಕ್ಕೆ ಉತ್ತರಿಸಲಾಗದೆ ಇಬ್ಬರೂ ಅಧಿಕಾರಿಗಳು ಮೌನವಾದರು.

ದಟ್ಟಣೆ ವೇಳೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ‘ಬಳ್ಳಾರಿ ರಸ್ತೆ, ಹೊಸೂರು ರಸ್ತೆ ಸೇರಿದಂತೆ ಎಲ್ಲೆಲ್ಲಿ ದಟ್ಟಣೆ ಹೆಚ್ಚಿದೆ ಎಂಬುದನ್ನು ತಿಳಿದುಕೊಳ್ಳಿ. ಆ ಪ್ರದೇಶಗಳಲ್ಲಿ ಹೆಚ್ಚು ಜನ ಓಡಾಡುವ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ’ ಎಂದು ಕುಮಾರಸ್ವಾಮಿ ಸೂಚಿಸಿದರು.

‘ದೇಶ ಹಾಗೂ ವಿದೇಶಗಳ ಕಣ್ಣು, ಬೆಂಗಳೂರಿನ ಮೇಲಿದೆ. ಇಲ್ಲಿಯ ದಟ್ಟಣೆಯಿಂದ ಹಲವರು ನಗರವನ್ನೇ ತೊರೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ಆಗುತ್ತಿದೆ. ದಟ್ಟಣೆ ನಿಯಂತ್ರಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಿ. ನನ್ನ  ಸಹಕಾರ ನಿಮಗಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !