ದುಃಸ್ಥಿತಿಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಕಟ್ಟಡ

ಬೆಂಗಳೂರು: ಹೆಬ್ಬಾಳ ಪೊಲೀಸ್ ಠಾಣೆ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಪೊಲೀಸರು, ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.
‘ಠಾಣೆಯ ಮುಂಭಾಗದಲ್ಲಿ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸರ್ವೀಸ್ ರಸ್ತೆಯು ಮತ್ತಷ್ಟೂ ಕಿರಿದಾಗಿದೆ. ಇದರಿಂದ ನಾಗರಿಕರು ಹಾಗೂ ಪೊಲೀಸ್ ಸಿಬ್ಬಂದಿ ಹಲವು ಸಮಸ್ಯೆ ಎದುರಿಸಬೇಕಾಗಿದೆ. ಪಾರ್ಕಿಂಗ್ ಸೌಲಭ್ಯವೂ ಇಲ್ಲ. ಆದ್ದರಿಂದ ಕೂಡಲೇ ಬೇರೆ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಿ ಠಾಣೆಯನ್ನು ಸ್ಥಳಾಂತರಿಸಬೇಕು' ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
‘ಠಾಣೆಯಲ್ಲಿ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ. ಸಿಬ್ಬಂದಿಗೆ ಕುಳಿತುಕೊಳ್ಳಲು ಮತ್ತು ವಿಚಾರಣೆ ನಡೆಸಲು ಸರಿಯಾದ ಜಾಗವಿಲ್ಲ. ಕಡತಗಳನ್ನು, ವಶಪಡಿಸಿಕೊಂಡ ವಸ್ತುಗಳನ್ನು ಇಡಲು ಸ್ಥಳವಿಲ್ಲ. ಮಳೆ ಬಂದರೆ ಬಾಗಿಲು ಮತ್ತು ಕಿಟಕಿಯ ಮೂಲಕ ನೀರು ಒಳ ಬರುತ್ತದೆ. ರಸ್ತೆ ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿರು
ವುದರಿಂದ ಭೂಮಿಯಲ್ಲಿ ತಂತಿಗಳು ತುಂಡಾಗಿ, ಇಂಟರ್ ನೆಟ್ ಕಾರ್ಯ ನಿರ್ವಹಿಸದೆ ಎಫ್ಐಆರ್ ದಾಖಲಿಸುವುದು ಸೇರಿದಂತೆ ಹಲವು ಕಾರ್ಯಗಳಿಗೆ ಅಡಚಣೆಯಾಗುತ್ತಿದೆ’ ಎಂಬುದು ಪೊಲೀಸರ ಅಳಲು .
‘ಆನಂದನಗರ ಬಸ್ ನಿಲ್ದಾಣದ ಬಳಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ಕಾರ್ಯ ವಿಳಂಬದಿಂದ ಸಮಸ್ಯೆ ಉಂಟಾಗಿದ್ದು, ಆದಷ್ಟು ಬೇಗನೆ ಜಾಗ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ, ಮತ್ತೊಮ್ಮೆ ಪತ್ರ ಬರೆಯಲಾಗುವುದು. ಈ ಪ್ರಕ್ರಿಯೆ ಮುಗಿದಕೂಡಲೇ ಸುಸಜ್ಜಿತ ಕಟ್ಟಡ ನಿರ್ಮಿಸಿ, ಠಾಣೆಯನ್ನು ಸ್ಥಳಾಂತರಿಸಲಾಗುವುದು’ ಎಂದು ಶಾಸಕ ಬೈರತಿ ಸುರೇಶ್ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.