ಮಂಗಳವಾರ, ಮೇ 18, 2021
28 °C

ಹೆಬ್ಬಾಳದಲ್ಲಿ ಕೋವಿಡ್‌ ಆರೈಕೆ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೆಬ್ಬಾಳದ ಪಶುವೈದ್ಯ ಕಾಲೇಜಿನ ಪ್ರಾಂಗಣದಲ್ಲಿ ತುರ್ತಾಗಿ ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಪೂರ್ವ ವಲಯದ ಅಧಿಕಾರಿಗಳಿಗೆ ಸೂಚಿಸಿದರು.

ಪೂರ್ವ ವಲಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಅವರು ಭಾನುವಾರ ಪರಿಶೀಲಿಸಿದರು.

‘ಸುಮಾರು 60 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಆರೈಕೆ ಕೇಂದ್ರವನ್ನು ಸೋಮವಾರ ಸಂಜೆ ಒಳಗೆ ಸಿದ್ಧಪಡಿಸಬೇಕು. ಇಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಪೂರ್ವ ವಲಯ ಆಯುಕ್ತ ಮನೋಜ್ ಜೈನ್ ಹಾಗೂ ಜಂಟಿ ಆಯುಕ್ತರಾದ ಪಲ್ಲವಿ ಅವರಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು.

‘ಕೋವಿಡ್ ಆರೈಕೆ ಕೇಂದ್ರ ತೆರೆಯುವುದರಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಆಗಲಿದೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲಿ ಪ್ರತ್ಯೇಕವಾಗಿ ಆರೈಕೆಗೆ ಒಳಗಾಗಲು ಸೌಲಭ್ಯವಿಲ್ಲದಿದ್ದರೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು’ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು