ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಡಿಜಿ–ಐಜಿಪಿ ಆದೇಶ

Published 19 ಮಾರ್ಚ್ 2024, 18:29 IST
Last Updated 19 ಮಾರ್ಚ್ 2024, 18:29 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎಲ್ಲ ಪೊಲೀಸರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ–ಐಜಿಪಿ) ಪರವಾಗಿ ಎಡಿಜಿಪಿ ಅಲೋಕ್‌ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

‘ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ಪೊಲೀಸರು ಹೆಲ್ಮೆಟ್‌ ಧರಿಸದೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾರೆ. ಅಪಘಾತಗಳು ಸಂಭವಿಸಿ, ಹಲವು ಪೊಲೀಸರು ಗಾಯಗೊಳ್ಳುತ್ತಿದ್ದಾರೆ. ಕೆಲ ಪೊಲೀಸರು ಪ್ರಾಣವನ್ನೂ ಕಳೆದುಕೊಂಡಿರುವುದು ಕಂಡುಬಂದಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ಅಪಘಾತದಿಂದ ಆಗುವ ಸಾವು–ನೋವುಗಳನ್ನು ತಪ್ಪಿಸಲು, ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಮೋಟರು ವಾಹನ ಕಾಯ್ದೆ ನಿಯಮಗಳನ್ನು ಪಾಲಿಸಬೇಕು. ತಮ್ಮ ವ್ಯಾಪ್ತಿಯ ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವಂತೆ ನೋಡಿಕೊಳ್ಳುವ ಬಗ್ಗೆ ಹಿರಿಯ ಅಧಿಕಾರಿಗಳು ನಿರ್ದೇಶನ ನೀಡಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT