ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

Published 30 ಮಾರ್ಚ್ 2024, 16:06 IST
Last Updated 30 ಮಾರ್ಚ್ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅವರ ಜಾಗಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್‌ ಕಿಶೋರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಶನಿವಾರವೇ ಅವರು ಅಧಿಕಾರ ಸ್ವೀಕರಿಸಿದ್ದಾರೆ.

‘ಹೇಮಂತ್‌ ನಿಂಬಾಳ್ಕರ್ ಅವರು ತಮ್ಮ ಪತ್ನಿ ಹಾಗೂ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಪರವಾಗಿ ಮತ ನೀಡುವಂತೆ ಪ್ರಭಾವ ಬೀರುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತಕ್ಷಣವೇ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಬೇಕು. ರಾಜ್ಯ ಒಳಗೇ ಇದ್ದರೆ ಮತ್ತೆ ತಮ್ಮ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗೆ ಕೆಲಸ ಮಾಡಲು ಅವಕಾಶ ಕೊಡಬೇಕು’ ಎಂದು ಮೂರು ದಿನಗಳ ಹಿಂದಷ್ಟೇ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಹಿನ್ನೆಲೆಯೊಳಗೆ ಅವರನ್ನು ವರ್ಗಾವಣಾ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT