ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಹೆಸರಘಟ್ಟ: ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಾಸುವೆಘಟ್ಟ ಗ್ರಾಮದ ಕೆ.ರಘು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಲತಾರಾಜು ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ(ಬಿ) ಮೀಸಲಾಗಿತ್ತು. ಚುನಾವಣೆಯಲ್ಲಿ ರಘು ಮತ್ತು ಲತಾರಾಜು ಆಯ್ಕೆಯಾದರು.
ಕಾಚೋಹಳ್ಳಿ: ದಾಸನಪುರ ಹೋಬಳಿ ಕಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕುಮಾರಸ್ವಾಮಿ, ಉಪಾಧ್ಯಕ್ಷರಾಗಿ ಪ್ರೇಮಕುಮಾರಿ ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.