ಶುಕ್ರವಾರ, ಜನವರಿ 22, 2021
19 °C

ಹೆಸರಘಟ್ಟ: ಚಿಣ್ಣರಿಗಾಗಿ ಪುಸ್ತಕ ಜೋಳಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ರಾಜಾನುಕುಂಟೆ ಗ್ರಾಮ ಪಂಚಾಯಿತಿ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಶಾಲಾ ಮಕ್ಕಳಿಗಾಗಿ ಪುಸ್ತಕ ಜೋಳಿಗೆ ಕಾರ್ಯಕ್ರಮ ಪ್ರಾರಂಭಿಸಿದೆ.

’ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರತಿ ಗ್ರಾಮಗಳಲ್ಲಿ ಪುಸ್ತಕಗಳ ವಾಹನವೊಂದು ಬೆಳಿಗ್ಗೆ 9ರಿಂದ ಸಂಜೆ 5 ಘಂಟೆಯ ವರೆಗೆ ನಿಲ್ಲುತ್ತದೆ. ಗ್ರಾಮದಲ್ಲಿರುವ ಶಾಲಾ ಮಕ್ಕಳು ತಮಗೆ ಬೇಕಾದ ಪುಸ್ತಕಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು‘ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಜೇಶ್ ಹೇಳಿದರು.

’‌ಈಗಾಗಲೇ ಅನೇಕ ಪೋಷಕರು ಪುಸ್ತಕಗಳನ್ನು ನೀಡಿದ್ದಾರೆ. ಈ ಪುಸ್ತಕಗಳನ್ನು ಮಕ್ಕಳಿಗೆ ಓದಲು ಕೊಡುತ್ತೇವೆ‘ ಎಂದು ರಾಜಾನುಕುಂಟೆ ಗ್ರಂಥಾಲಯ ಮೇಲ್ವಿಚಾರಕ ಕೃಷ್ಣಪ್ಪ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು