ಶನಿವಾರ, ಮೇ 8, 2021
17 °C

ದಾಸನಪುರ ಎಪಿಎಂಸಿ ವರ್ತಕರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಮಳಿಗೆ ಬಾಡಿಗೆ ನೀಡುವಂತೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ದಾಸನಪುರ ಎ.ಪಿ.ಎಂ.ಸಿ. ವರ್ತಕರ ಸಂಘವು ಪ್ರತಿಭಟನೆ ನಡೆಸಿತು.

‘ದಾಸನಪುರ ಎಪಿಎಂಸಿಯನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ₹300 ಕೋಟಿ ಬಂಡವಾಳ ಹಾಕಿ ನಿರ್ಮಿಸಿರುವ ಈ ಎಪಿಎಂಸಿಯಲ್ಲಿ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ’ ಎಂದು ವರ್ತಕರ ಸಂಘದ ಅಧ್ಯಕ್ಷ ಬಿ.ಅರ್.ಶ್ರೀರಾಮ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್‌ ಬಿಕ್ಕಟ್ಟಿನ ಕಾಋಣ ಬಾಡಿಗೆ ಮನ್ನಾ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಈಗ ಕಟ್ಟಲೇಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಅಧಿಕಾರಿಗಳ ಈ ವರ್ತನೆ ಬೇಸರ ತಂದಿದೆ’ ಎಂದರು.

‘ಯಶವಂತಪುರ ಮತ್ತು ದಾಸನಪುರ ಎರಡು ಕೇಂದ್ರಗಳಲ್ಲಿ ವ್ಯಾಪಾರ ಕೇಂದ್ರವನ್ನು ತೆರೆದಿರುವುದರಿಂದ ದಾಸನಪುರ ಕೇಂದ್ರದಲ್ಲಿ ವ್ಯಾಪಾರ ನಡೆಯುತ್ತಿಲ್ಲ. ಯಾವುದಾದರೂ ಒಂದು ಕೇಂದ್ರದಲ್ಲಿ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಅಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದೇವೆ. ಆದರೆ ಯಾವುದೇ ಪ್ರಯೋಜವಾಗಿಲ್ಲ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು