ಭಾನುವಾರ, ಮೇ 22, 2022
28 °C

ಐದು ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ದಾಸನಪುರ ಮತ್ತು ಹೆಸರಘಟ್ಟ ಹೋಬಳಿಯಲ್ಲಿ ಐದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಮಂಗಳವಾರ ನಡೆಯಿತು. 

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ವೀರಣ್ಣ ಮತ್ತು ಉಪಾಧ್ಯಕ್ಷರಾಗಿ ಅರ್ಪಣಾ ಅಂಬಿಕಾ ಅವಿರೋಧವಾಗಿ ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ದಾಸನಪುರ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಯಶೋಧಮ್ಮ ಚಿಕ್ಕಣ್ಣ, ಉಪಾಧ್ಯಕ್ಷರಾಗಿ ಗೀತಾ ಅವಿರೋಧವಾಗಿ ಆಯ್ಕೆಯಾದರು.

ಮಾಚೋಹಳ್ಳಿ ಗ್ರಾಮ ಪಂಚಾಯಿತಿಗೆ ಎಂ.ಬಿ.ರಾಮಕೃಷ್ಣಯ್ಯ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಜಿ.ಜಾನಕಮ್ಮ ಅವಿರೋಧವಾಗಿ ಆಯ್ಕೆಗೊಂಡರು. ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮತ್ತು ಬಿಸಿಎಂ(ಎ)ಗೆ ಉಪಾದ್ಯಕ್ಷ ಸ್ಥಾನ ಮೀಸಲಾಗಿತ್ತು.

ಶಿವಕೋಟೆ ಗ್ರಾಮ ಪಂಚಾಯಿತಿಗೆ ಇಂದಿರಮ್ಮ ಅಧ್ಯಕ್ಷರಾಗಿ, ಮುನಿಎಲ್ಲಪ್ಪ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

ದಾಸನಪುರ ಹೋಬಳಿ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಗೆ ಲಕ್ಷ್ಮೀನರಸಮ್ಮ ಅಧ್ಯಕ್ಷರಾಗಿ, ನಾಗರಾಜ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು