ಭಾನುವಾರ, ಜುಲೈ 3, 2022
22 °C

ಮಂಗಳೂರಿನಲ್ಲಿ ‘ಬಾಂಬ್’ ನಗರದಾದ್ಯಂತ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣ ಈಗಾಗಲೇ ಹೆಚ್ಚಿನ ಭದ್ರತಾ ವ್ಯಾಪ್ತಿಯಲ್ಲಿದೆ. ಇಲ್ಲಿ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ನಿಲ್ದಾಣದ ಪ್ರವೇಶ ಸ್ಥಳದಲ್ಲೇ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಟರ್ಮಿನಲ್‌ಗೆ ಪ್ರವೇಶ ಸೇರಿದಂತೆ ಎಲ್ಲ ಕಡೆ ಭದ್ರತೆ ಇದೆ. ವಿಮಾನ ನಿಲ್ದಾಣದ ಆವರಣದಲ್ಲಿ ಸ್ಥಳೀಯ ಪೊಲೀಸರು ವಿಶೇಷ ನಿಗಾ ವಹಿಸುತ್ತಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದರು.

‘ಹೆಚ್ಚಿನ ಭದ್ರತೆ ಹಾಗೂ ತೀವ್ರ ನಿಗಾ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಡಾ. ಅಮರ್ ಕುಮಾರ್‌ಪಾಂಡೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು