ಭಾನುವಾರ, ಜನವರಿ 26, 2020
21 °C

‘ರಾಜ್ಯಸಭೆಗೆ ಅವಕಾಶ: ಹೈಕಮಾಂಡ್ ನಿರ್ಧಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ರಾಜ್ಯಸಭೆಯಲ್ಲಿ ನನಗೆ ಅವಕಾಶ ಕಲ್ಪಿಸುವ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.

‘ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ರಾಜ್ಯಸಭೆಯಲ್ಲಿ ಕೆಲಸಮಾಡಲು ಅವಕಾಶ ಕಲ್ಪಿಸಿದರೆ ಒಪ್ಪಿಕೊಳ್ಳಬೇಕಾಗುತ್ತದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರು ಭಯೋತ್ಪಾದನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಬಗ್ಗೆ ಇದ್ದ ಭಾವನೆ ಬದಲಾಗುತ್ತಿದೆ. ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನೆರೆ ಪರಿಹಾರವಾಗಿ ರಾಜ್ಯಕ್ಕೆ ₹30 ಸಾವಿರ ಕೊಡಲು ಸಾಧ್ಯವಿಲ್ಲ. ಆದರೆ ₹100 ಕೇಳಿದರೆ, ₹1 ಕೊಟ್ಟರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು