ಬುಧವಾರ, ಜನವರಿ 29, 2020
26 °C

ರಾಷ್ಟ್ರಧ್ವಜ ಹಾರಾಟಕ್ಕೆ ಬಲವಂತ ಸಲ್ಲ: ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರಧ್ವಜ ಪ್ರದರ್ಶನ ಅಥವಾ ಹಾರಾಟದ ವಿಷಯದಲ್ಲಿ ಯಾರನ್ನೂ ಬಲವಂತ ಮಾಡುವಂತಿಲ್ಲ. ಒಂದೊಮ್ಮೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದರೆ ಅದು ಅಪರಾಧ’ ಎಂದು ಹೈಕೋರ್ಟ್‌ ಹೇಳಿದೆ.

‘ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಬೋಧನ ಗ್ರಾಮದ ಅಂಗನವಾಡಿ ಕೇಂದ್ರದ ಸರ್ಕಾರಿ ಕಟ್ಟಡದ ಮೇಲೆ 2019ರ ಆಗಸ್ಟ್ 15 ರಂದು ರಾಷ್ಟ್ರ ಧ್ವಜಾರೋಹಣ ಮಾಡಿಲ್ಲ’ ಎಂದು ಆಕ್ಷೇಪಿಸಿ ಅದೇ ಗ್ರಾಮದ ರಮೇಶ್ ಲಕ್ಷ್ಮಣ ಗಜಾರೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ರಾಷ್ಟ್ರಧ್ವಜ ಪ್ರದರ್ಶನ ಹಾಗೂ ಹಾರಾಟದ ಬಗ್ಗೆ ಭಾರತೀಯ ಧ್ವಜಸಂಹಿತೆ-2002ರಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ. ಆದ್ದರಿಂದ ಈ ವಿಚಾರದಲ್ಲಿ ಆದೇಶ ಅಥವಾ ನಿರ್ದೇಶನ ನೀಡಲು ಸಾಧ್ಯವಿಲ್ಲ. ಧ್ವಜಾರೋಹಣ ಮಾಡದ ಅಂಗನವಾಡಿ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಧ್ವಜ ಹಾರಿಸಲು ನಿದೇರ್ಶನ ನೀಡಬೇಕು ಎಂಬ ಮನವಿ ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು