ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಬಂದ್: ಕ್ರಮಕ್ಕೆ ಕೋರಿ ಪಿಐಎಲ್

Last Updated 28 ಮಾರ್ಚ್ 2020, 20:39 IST
ಅಕ್ಷರ ಗಾತ್ರ

ಬೆಂಗಳೂರು: ‘ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ ಗ್ರಾಮೀಣ ಪ್ರದೇಶಗಳಲ್ಲಿ ಒಳಬರುವ ಮತ್ತು ಹೊರಹೋಗುವ ದಾರಿಗಳನ್ನು ಕೆಲ ಗೂಂಡಾ ಶಕ್ತಿಗಳು ಬಂದ್ ಮಾಡುತ್ತಿರುವುದರಿಂದ ತುರ್ತು ವೈದ್ಯಕೀಯ ಹಾಗೂ ಆಹಾರ ಪಡಿತರ ಸೇವೆಗೆ ವ್ಯತ್ಯಯವಾಗಿದೆ.

ಈ ಸಂಬಂಧ ಪೊಲೀಸರು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ವಕೀಲ ಎಲ್.ರಮೇಶ್ ನಾಯಕ್ ಈ ಅರ್ಜಿ ಸಲ್ಲಿಸಿದ್ದು, ವಿಚಾರಣೆಗೆ ಬರಬೇಕಿದೆ.

‘ರಸ್ತೆಗಳನ್ನು ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದ ಜನರು ತೊಂದರೆಗೆ ಸಿಲುಕಿದ್ದಾರೆ’ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT