ಶನಿವಾರ, ಆಗಸ್ಟ್ 20, 2022
21 °C

ಗುಡಿಸಲು ನಾಶ: ಪುನರ್‌ವಸತಿಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಾಚರಕನಹಳ್ಳಿಯಲ್ಲಿ ಗುಡಿಸಲು ಕಳೆದುಕೊಂಡ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

 ಈ ಘಟನೆಯಲ್ಲಿ ಸುಮಾರು 170 ಕುಟುಂಬಗಳು ಮನೆ ಕಳೆದುಕೊಂಡಿವೆ. ಈ ಘಟನೆ ಬಗ್ಗೆ ಸರ್ಕಾರದ ಆಡಳಿತ ಯಂತ್ರಕ್ಕೆ ಸಂಪೂರ್ಣ ಮಾಹಿತಿ ಇತ್ತು.  ಈ ಜನರ ಮೂಲಭೂತ ಹಕ್ಕು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿತು.

‘ಪರಿಹಾರ ಪ್ರಕ್ರಿಯೆಯನ್ನು ಮೂರು ವಾರಗಳಲ್ಲಿ ಪೂರ್ಣಗೊಳಿಸಬೇಕು. ಗುಡಿಸಲು ನಾಶ ಮಾಡಿದ ಸ್ಥಳದಲ್ಲೇ ಪುನರ್ವಸತಿ ಕಲ್ಪಿಸಬೇಕು’ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು