ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಪರಿಶೀಲನೆಗೆ ಕೋರ್ಟ್‌ ಕಮಿಷನರ್‌ಗಳ ನೇಮಕ

Last Updated 17 ಡಿಸೆಂಬರ್ 2020, 21:41 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿರುವ ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ಕೋರ್ಟ್ ಕಮೀಷನರ್‌ಗಳನ್ನು ಹೈಕೋರ್ಟ್‌ ನೇಮಕ ಮಾಡಿ ಆದೇಶಿಸಿದೆ.

ರಸ್ತೆ ಗುಂಡಿ ಸಮರ್ಪಕವಾಗಿ ಮುಚ್ಚಲು ಬಿಬಿಎಂಪಿ ವಿಫಲವಾಗಿದೆ ಎಂದು ಆರೋಪಿಸಿ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು 2017ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ, ಅರ್ಜಿದಾರರ ಪರ ವಕೀಲರನ್ನು ಕೋರ್ಟ್ ಕಮೀಷನರ್‌ ಆಗಿ ನೇಮಕ ಮಾಡಲಾಗಿದೆ. ಬಿಬಿಎಂಪಿ ರಸ್ತೆ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿದೆ ಎಂದು ನೀಡಿರುವ 74 ರಸ್ತೆಗಳಿಗೆ ಕೋರ್ಟ್ ಕಮೀಷನರ್‌ಗಳು ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT