ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಚ್ ವಾರಂಟ್‌ಗೆ ಮುನ್ನ ಸಮನ್ಸ್‌ ಕಡ್ಡಾಯವಲ್ಲ: ಹೈಕೋರ್ಟ್

Last Updated 20 ಜನವರಿ 2021, 18:31 IST
ಅಕ್ಷರ ಗಾತ್ರ

ಬೆಂಗಳೂರು: ಸಮನ್ಸ್ ಜಾರಿಗೊಳಿಸದೆ ಸರ್ಚ್ ವಾರಂಟ್ ಹೊರಡಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಡಿ.ಜೆ.ಹಳ್ಳಿ ಗಲಭೆ ಪ್ರಕಣದಲ್ಲಿ ಕಚೇರಿ ಶೋಧ ನಡೆಸಲು ವಾರಂಟ್ ಹೊರಡಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ‘ಸಿಆರ್‌ಪಿಸಿಯ ಸೆಕ್ಷನ್ 93 (1) (ಸಿ) ಅಡಿಯಲ್ಲಿ ಸರ್ಚ್ ವಾರಂಟ್ ಹೊರಡಿಸುವ ಮೊದಲು ಸಮನ್ಸ್ ಜಾರಿಗೊಳಿಸಬೇಕು ಎಂಬುದು ಎಲ್ಲಾ ಸಂದರ್ಭಕ್ಕೂ ಅನ್ವಯವಾಗುವುದಿಲ್ಲ’ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT