ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಿಡವಿಟ್ ಸಲ್ಲಿಸಲು ಬೆಸ್ಕಾಂಗೆ ಹೈಕೋರ್ಟ್‌ ನಿರ್ದೇಶನ

Last Updated 16 ಮಾರ್ಚ್ 2021, 18:18 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಅನುಮತಿ ಪಡೆಯದೆ ಪಾದಚಾರಿ ಮಾರ್ಗಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ಅಧಿಕಾರ ಇದೆಯೇ ಎಂಬುದರ ಕುರಿತು ನಿರ್ದಿಷ್ಟ ನಿಲುವು ತೆಗೆದುಕೊಂಡು ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಪಾದಚಾರಿಗಳ ಸುರಕ್ಷತೆಗೆ ಧಕ್ಕೆ ಆಗದಂತೆ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ಪ್ರಯತ್ನಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT