ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರ್ವಸತಿ ಯೋಜನೆ ವಾರದಲ್ಲಿ ಅಂತಿಮ

Last Updated 27 ಫೆಬ್ರುವರಿ 2020, 5:20 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಬಾಂಗ್ಲಾ ವಲಸಿಗರ ತೆರವು ಕಾರ್ಯಾಚರಣೆ ನೆಪದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಒಕ್ಕಲೆಬ್ಬಿಸಿರುವ ನೂರಾರು ನಿರಾಶ್ರಿತ ವಲಸೆ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಒಂದು ವಾರದೊಳಗೆ ಅಂತಿಮಗೊಳಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು, ‘ನಿರಾಶ್ರಿತರ ಪುನರ್ವಸತಿಗೆ ಯೋಜನೆಯನ್ನು ರೂಪಿಸಲಾಗುತ್ತಿದೆ. ಯೋಜನೆ ಅಂತಿಮಗೊಳಿಸಲು ಒಂದು ವಾರ ಕಾಲಾವಕಾಶಬೇಕು’ ಎಂದು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಮಹದೇವಪುರ ವಲಯದ ಮಾರತಹಳ್ಳಿ ವ್ಯಾಪ್ತಿಯ ಕಾಡುಬೀಸನಹಳ್ಳಿ, ಕರಿಮ್ಮಯನ ಅಗ್ರಹಾರ, ಬೆಳ್ಳಂದೂರು, ತೂಬರಹಳ್ಳಿ, ಕುಂದಲಹಳ್ಳಿಯ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡುವ ಯೋಜನೆ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ವಿವರಗಳನ್ನು ಸಲ್ಲಿಸಿ’ ಎಂದು ನಿರ್ದೇಶಿಸಿ ಮಾರ್ಚ್ 6ಕ್ಕೆ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT