ಶುಕ್ರವಾರ, ಮೇ 20, 2022
24 °C

ಸಂಪತ್‌ ರಾಜ್‌ಗೆ ಹೈಕೋರ್ಟ್ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಮೇಯರ್ ಸಂಪತ್‌ರಾಜ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡಬೇಕು, ಸಾಕ್ಷ್ಯ ನಾಶಕ್ಕೆ ಪ್ರಯತ್ನ ಮಾಡಬಾರದು ಮತ್ತು ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ನಗರ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ಜಾಮೀನು ನೀಡಿದೆ.

ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸುವಂತೆ ಸಿಸಿಬಿ ಪೊಲೀಸರು ಯಾವಾಗ ಬೇಕಿದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ತಿಳಿಸಿದೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿಗೆ ಪಿತೂರಿ ಮಾಡಿದ್ದ ಆರೋಪದಲ್ಲಿ ಸಂಪತ್ ರಾಜ್ ವಿರುದ್ಧ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು