ಮಂಗಳವಾರ, ಸೆಪ್ಟೆಂಬರ್ 28, 2021
20 °C

ಲಾಕ್‌ಡೌನ್ ಅವಧಿಯ ತೆರಿಗೆ: ಬಿಬಿಎಂಪಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಪಾಲಿಕೆಯ ಜಾಗ ಮತ್ತು ಕಟ್ಟಡಗಳಿಗೆ ತೆರಿಗೆ ವಿಧಿಸಿದ್ದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ನಗರದಲ್ಲಿ ಶಾಪಿಂಗ್ ಮಾಲ್ ಹೊಂದಿರುವ ಜಿ.ಟಿ. ಸಿನಿಮಾಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಈ ಅರ್ಜಿ ಸಲ್ಲಿಸಿದ್ದು, ‘ಪಾಲಿಕೆಯ ಆಸ್ತಿ ಉಪಯೋಗಿಸಲು ಲಾಕ್‌ಡೌನ್ ಅವಧಿಯಲ್ಲಿ ನಿರ್ಬಂಧ ಇತ್ತು. ಆ ಅವಧಿಯ ತೆರಿಗೆ ಪಾವತಿಸುವುದು ಹೇಗೆ’ ಎಂದು ಪ್ರಶ್ನಿಸಿದೆ.

2019–20, 2020–21 ಮತ್ತು 2021–22 ಹಣಕಾಸು ವರ್ಷಗಳಲ್ಲಿ ಲಾಕ್‌ಡೌನ್ ಕಾರಣಕ್ಕೆ ಹಲವು ದಿನ ಮುಚ್ಚಲಾಗಿತ್ತು. ಆದರೂ, ತೆರಿಗೆ ವಿಧಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಆಸ್ತಿ ತೆರಿಗೆ ಪಾವತಿಗೆ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸುವಂತೆ ಅರ್ಜಿದಾರರ ಪರ ವಕೀಲರು ಕೋರಿದರು. ಬಿಬಿಎಂಪಿ ಕ್ರಮಕ್ಕೆ ಮುಂದಾದರೆ ಕಾನೂನಿನ ಅಡಿಯಲ್ಲಿ ಮುಂದುವರಿಯಲು ಅರ್ಜಿದಾರರು ಸ್ವತಂತ್ರರು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ‍ಪೀಠ ತಿಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು