ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಧರಿಸದವರಿಂದ ₹3 ಕೋಟಿ ದಂಡ ಸಂಗ್ರಹಿಸಿದ ಬಿಬಿಎಂಪಿ

Last Updated 9 ಅಕ್ಟೋಬರ್ 2020, 2:14 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವುದು ಕಡ್ಡಾಯಎಂಬ ನಿಯಮ ಉಲ್ಲಂಘಿಸಿದ ಜನರಿಂದ ₹3 ಕೋಟಿ ದಂಡ ವಸೂಲಿ ಮಾಡಲಾಗಿದೆ’ ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.

‘ಮಾಸ್ಕ್ ಧರಿಸದ 1.25 ಲಕ್ಷ ಜನರಿಂದ ₹2.66 ಕೋಟಿ ಸಂಗ್ರಹಿಸಲಾಗಿದೆ. ಅಂತರ ಕಾಪಾಡದ ಜನರಿಂದ ₹31.5 ಲಕ್ಷ ಸಂಗ್ರಹಿಸಲಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸದ 170 ಸಂಸ್ಥೆಗಳನ್ನು ಮುಚ್ಚಿಸಲಾಗಿದೆ’ ಎಂದು ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಾದ್ಯಂತ5,121 ಹೊಸ ಪ್ರಕರಣಗಳು ದಾಖಲಾಗಿವೆ, 43 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,505 ಜನ ಗುಣಮುಖರಾಗಿದ್ದಾರೆ. ಒಟ್ಟು 60,197 ಕೊರೊನಾ ವೈರಸ್‌ ಸೋಂಕು ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT