ಗುರುವಾರ , ಅಕ್ಟೋಬರ್ 1, 2020
28 °C

ಅಕ್ರಮ ನಿವಾಸಿಗಳಿದ್ದರೆ ಕ್ರಮ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಬಿಎಂಪಿ

ಬೆಂಗಳೂರು: ಸ್ವಾಧೀನಾನುಭವ ದೃಢೀಕರಣ ಪತ್ರ ಇಲ್ಲದೇ ಕಟ್ಟಡದಲ್ಲಿ ನೆಲೆಸಿದ್ದರೆ ಜೆ.ಪಿ.ನಗರ 4ನೇ ಹಂತದ ಡಾಲರ್ಸ್‌ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಂಜೂರಾದ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗಿದೆ. ಎರಡು ಮಹಡಿಗಳಲ್ಲಿ ಅಕ್ರಮವಾಗಿ ನೆಲೆಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮುಂದೆ ಎದುರುದಾರ ಪರ ವಕೀಲರು, ‘ಸಂಘದ ಪದಾಧಿಕಾರಿಗಳೂ ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದ ವಾಸವಿದ್ದಾರೆ’ ಎಂದು ತಿಳಿಸಿದರು. ‘ಯಾರೇ ಅಕ್ರಮವಾಗಿ ನೆಲೆಸಿದ್ದರೂ ಕ್ರಮ ಕೈಗೊಳ್ಳಿ’ ಎಂದು ಪೀಠವು ಪಾಲಿಕೆಗೆ ತಿಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು