ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದ್ಯುತ್ ಪರಿವರ್ತಕದಿಂದ ತೊಂದರೆ ಆಗದಂತೆ ಕ್ರಮ’

Last Updated 23 ಜುಲೈ 2021, 6:43 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳ ಮೇಲಿರುವ 3,196 ವಿದ್ಯುತ್ ಪರಿವರ್ತಕಗಳನ್ನು ತೆಗೆದು ಸಾರ್ವಜನಿಕರ ತಿರುಗಾಟಕ್ಕೆ ತೊಂದರೆ ಆಗದಂತೆ ಹೊಸದಾಗಿ ವಿನ್ಯಾಸಗೊಳಿಸಿದ ಕಂಬಗಳ ಮೇಲೆ (ಸ್ಪನ್ ಪೋಲ್ ಸ್ಟ್ರಕ್ಚರ್) ಪರಿವರ್ತಕ ಅಳವಡಿಸಲಾಗಿದೆ ಎಂದು ಹೈಕೋರ್ಟ್‌ಗೆ ಬೆಸ್ಕಾಂ ಮಾಹಿತಿ ನೀಡಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ 2,785 ವಿದ್ಯುತ್ ಪರಿವರ್ತಕಗಳನ್ನು ಹೊಸ ವಿನ್ಯಾಸಕ್ಕೆ ಬದಲಾಯಿಸಲು ಗುರುತಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಇವುಗಳಲ್ಲಿ 764 ವಿದ್ಯುತ್ ಪರಿವರ್ತಕಗಳನ್ನು ಬದಲಿಸುವ ಕಾರ್ಯ ನಡೆಯುತ್ತಿದೆ. ಉಳಿದ 2,021 ಕಡೆ ‍ಪರಿವರ್ತಕ ಬದಲಿಸಲು ಹೊಸ ಯೋಜನೆ ರೂಪಿಸಲಾಗಿದೆ. ಸ್ಥಳಾಂತರಕ್ಕೆ ಸೂಕ್ತ ಸ್ಥಳಗಳನ್ನು ನೀಡುವಂತೆ ಬಿಬಿಎಂಪಿಗೆ ಕೋರಲಾಗಿದೆ ಎಂದು ವಿವರಿಸಿದ್ದಾರೆ.

‘ಪಾದಚಾರಿ ಮಾರ್ಗದಲ್ಲಿನ ವಿದ್ಯುತ್ ಪರಿವರ್ತಕ ಗುರುತಿಸಲು ಬಿಬಿಎಂಪಿ ಜತೆ ಜಂಟಿಯಾಗಿ ಪರಿಶೀಲನೆ ನಡೆಸಿರುವುದು ಅಫಿಡವಿಟ್‌ನಲ್ಲಿ ಇಲ್ಲ. ಕೂಡಲೇ ಜಂಟಿಯಾಗಿ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಬೇಕು’ ಎಂದು ಪೀಠ ತಿಳಿಸಿತು. ಈ ವರದಿ ಆಧರಿಸಿ ಹೊಸ ಹೇಳಿಕೆ ಸಲ್ಲಿಸುವಂತೆ ಬೆಸ್ಕಾಂಗೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿತು.

ವಿದ್ಯುತ್ ಪರಿವರ್ತಕಗಳಿಂದ ಪಾದಚಾರಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ನಿವೃತ್ತ ವಿಂಗ್ ಕಮಾಂಡರ್ ಬಿ.ಜಿ. ಅತ್ರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT