ಶನಿವಾರ, ಮೇ 8, 2021
20 °C

ಮುಷ್ಕರದಿಂದ ಆದ ಹಾನಿ: ವರದಿ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಂಘಟನೆಗಳು 2020ರಲ್ಲಿ ನಡೆಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳ ತನಿಖೆಯ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.‌

‘₹2.6 ಕೋಟಿ ನಷ್ಟವಾಗಿದ್ದು, ಅದನ್ನು ವಾಪಸ್ ಪಡೆಯಲು ನೌಕರರ ಸಂಘಗಳ ಪದಾಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಬಿಎಂಟಿಸಿ ಪರ ವಕೀಲರು ಮಾಹಿತಿ ನೀಡಿದರು.

ತನಿಖೆಯ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿತು.

ನಗರದ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ‘ಸಮರ್ಪಣ’ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ‘2020ರ ಡಿಸೆಂಬರ್ 11ರಿಂದ 14ರವರೆಗೆ ನಡೆದ ಮುಷ್ಕರದ ಸಂದರ್ಭದಲ್ಲಿ 23 ಬಸ್‌ಗಳಿಗೆ ಹಾನಿಯಾಗಿ ₹7.9 ಕೋಟಿ ನಷ್ಟವಾಗಿತ್ತು’ ಎಂದು ತಿಳಿಸಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು