ಮಂಗಳವಾರ, ಸೆಪ್ಟೆಂಬರ್ 29, 2020
27 °C
ಬೆಳ್ಳಂದೂರಿನಲ್ಲಿ ಗುಡಿಸಲು ನಾಶ ಪ್ರಕರಣ

ಸರ್ಕಾರದ ವಿರುದ್ಧ ಅವಿಧೇಯತೆ ಪ್ರಕ್ರಿಯೆ: ಹೈಕೋರ್ಟ್ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಳ್ಳಂದೂರು ಪ್ರದೇಶದಲ್ಲಿ ಗುಡಿಸಿಲುಗಳನ್ನು ನಾಶ ಮಾಡಿದ್ದ ಪ್ರಕರಣದ ಸಂಬಂಧ 351 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸಮಗ್ರ ಯೋಜನೆಯನ್ನು ಸರ್ಕಾರ ಆರಂಭಿಸದಿದ್ದರೆ ಅವಿದೆಯತೆ ವಿಚಾರಣೆ ಆರಂಭಿಸಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಕೋವಿಡ್ ಕಾರಣಕ್ಕೆ ಯೋಜನೆ ಸಿದ್ಧಪಡಿಸಲು ವಿಳಂಬವಾಗುತ್ತಿದೆ ಎಂಬ ರಾಜ್ಯ ಸರ್ಕಾರದ ಉತ್ತರಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಎಲ್ಲಾ ಯೋಜನೆಗಳ ವಿಳಂಬಕ್ಕೂ ಕೋವಿಡ್ ಕಾರಣ ನೀಡಿದರೆ ಕ್ಷಮಿಸುವುದಿಲ್ಲ’ ಎಂದು ಹೇಳಿದೆ. 

‘ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂಬ ಶಂಕೆಯಲ್ಲಿ ಗುಡಿಸಿಲುಗಳನ್ನು ನಾಶ ಮಾಡಲಾಗಿದೆ. ಪುನರ್ವಸತಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ನೀಡಬೇಕಿರುವ ಹಕ್ಕು ದೊರಕಿಸುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು