ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.

ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ರೆಫರ್ಡ್ ಅರ್ಜಿ ಮತ್ತು ಶಿಕ್ಷೆ ರದ್ದುಪಡಿಸುವಂತೆ ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಜಯಬನ್ ಆದಿವಾಸಿ ಅಲಿಯಾಸ್ ಜಯಸಿಂಗ್ ಮತ್ತು ಮುಖೇಶ್ ಸಿಂಗ್, ಜಾರ್ಖಂಡ್ನ ಮನೀಶ್ ತಿರ್ಕಿ ಹಾಗೂ ಸೀತಾ ರಂತು ಲೋಹಾರ್ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೊ) ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಿಸಿದೆ.

ಅಂತೆಯೇ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

"ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ದುಷ್ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಲಿದೆ" ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

"ಅಪರಾಧಿಗಳು ಏಳು ವರ್ಷ ಏಳು ತಿಂಗಳ ಸಂತ್ರಸ್ತ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆ ತೀರಿಸಿಕೊಂಡಿದ್ದಾರೆ. ಒಬ್ಬರ ನಂತರ ಮತ್ತೊಬ್ಬರು ಅತ್ಯಾಚಾರ ಎಸಗಿದ್ದು, ಬಳಿಕ ಮೃತದೇಹವನ್ನು ಚರಂಡಿಗೆ ಎಸೆದಿರುವುದು ವಿಚಾರಣೆಯಲ್ಲಿ ದೃಢಪಟ್ಟಿದೆ. ಈ ಆಘಾಕಾರಿ ಘಟನೆ ಕೇವಲ ನ್ಯಾಯಾಂಗ ಮಾತ್ರವಲ್ಲ, ಇಡೀ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದೆ" ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಪ್ರಕರಣವೇನು?

ಆರೋಪಿಗಳು ಮಂಗಳೂರಿನ ವಾಮಂಜೂರು ಬಳಿಯ ಟೈಲ್ಸ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದರು. ಅದೇ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬರ ಪುತ್ರಿಯನ್ನು 2021ರ ನವೆಂಬರ್ 21ರಂದು, ಚಿಕ್ಕಿ ಕೊಡಿಸುವುದಾಗಿ ನಂಬಿಸಿ ತಮ್ಮ ಕೊಠಡಿಗೆ ಕರೆದೊಯ್ದಿದ್ದರು. ಒಬ್ಬ ಅರೋಪಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದರೆ, ಇನ್ನಿಬ್ಬರು ಅತ್ಯಾಚಾರ ಎಸಗಿದ್ದರು. ನಂತರ ಆಕೆಯ ಕುತ್ತಿಗೆ ಹಿಸುಕಿ ಸಾಯಿಸಿದ್ದರು. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಚರಂಡಿಗೆ ಎಸೆದಿದ್ದರು. ಮೃತದೇಹ ಪತ್ತೆಯಾದ ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗಳಿಗೆ ಗಲ್ಲು ಶಿಕ್ಷೆ ಜೊತೆಗೆ, ತಲಾ ₹40 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.