ಬುಧವಾರ, ಏಪ್ರಿಲ್ 8, 2020
19 °C

ಅನಧಿಕೃತ ಜಾಹೀರಾತು: ಮಾಹಿತಿ ಕೇಳಿದ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅನಧಿಕೃತ ಜಾಹಿರಾತು ಅಳವಡಿಕೆಗೆ ಸಂಬಂಧಿಸಿದಂತೆ ಈವರೆಗೆ ಬಂದಿರುವ ದೂರು ಮತ್ತು ದಾಖಲಿಸಿಕೊಂಡಿರುವ ಎಫ್‌ಐಆರ್‌ಗಳ ಬಗ್ಗೆ ಮಾಹಿತಿ ಒದಗಿಸಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಅಕ್ರಮ ಜಾಹಿರಾತುಗಳನ್ನು ತೆರವುಗೊಳಿಸುವಂತೆ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ  ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಷ್ಟು ಎಫ್‌ಐಆರ್‌ ದಾಖಲಿಸಲಾಗಿದೆ. ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಎಷ್ಟು ದೂರುಗಳು ಬಂದಿವೆ. ಅವುಗಳ ಸಂಬಂಧ ಈವರೆಗೆ ಯಾವ ಕ್ರಮ ಜರುಗಿಸಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್‌ 31ಕ್ಕೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು