ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಎಕರೆ ಜಮೀನು ಮರಳಿಸಲು ಹೈಕೋರ್ಟ್‌ ಆದೇಶ

Last Updated 18 ಮೇ 2022, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘ಭೂ ನ್ಯಾಯಮಂಡಳಿ ಮತ್ತು ಕಂದಾಯ ಅಧಿಕಾರಿಗಳು ನೀಡಿದ್ದ ಆದೇಶಗಳನ್ನು ರದ್ದುಗೊಳಿಸುವ ಮೂಲಕ ಐವತ್ತು ವರ್ಷಗಳ ಹಿಂದೆ ಮಂಜೂರಾಗಿದ್ದ 20 ಎಕರೆಯನ್ನು ಮೂಲ ಮಂಜೂರಾತಿ ಹೊಂದಿದವರಿಗೆ ನೀಡಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಐವರು ಮೂಲ ಭೂ ಮಂಜೂರಾತಿದಾರರ ಕಾನೂನು ಬದ್ಧ ವಾರಸುದಾರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

‘ಭೂ ನ್ಯಾಯಮಂಡಳಿಗಳು ಹೇಗೆ ಯಾಂತ್ರಿಕವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳ ಪರವಾಗಿ ನೀಡಿದ ಭೂ ಮಂಜೂರಾತಿಯನ್ನು ಶ್ರೀಮಂತರು ಹೇಗೆ ಕಸಿದುಕೊಳ್ಳುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ,‘ಮೂರು ತಿಂಗಳ ಒಳಗೆ ಜಮೀನನ್ನು ಮೂಲ ಮಂಜೂರಾತಿದಾರರ ಕಾನೂನು ಬದ್ಧ ವಾರಸುದಾರರಿಗೆ ಮರಳಿಸಬೇಕು’ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಿಭಾಗಾಧಿಕಾರಿಗೆ ನ್ಯಾಯಪೀಠ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT