ಭಾನುವಾರ, ನವೆಂಬರ್ 29, 2020
25 °C

ಮಾಸ್ಕ್: ವಿಶೇಷ ತಂಡ ರಚನೆಗೆ ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮಾಸ್ಕ್ ಧರಿಸಬೇಕು ಮತ್ತು ಅಂತರ ಕಾಪಾಡಬೇಕು ಎಂಬ ನಿಯಮ ಕಡ್ಡಾಯ ಜಾರಿಗೆ ವಿಶೇಷ ತಂಡ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಲೆಟ್ಜ್‌ಕಿಟ್‌ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಬೆಂಗಳೂರಿನಲ್ಲಿ ಈ ನಿಯಮ ಜಾರಿಗೆ 198 ಮಾರ್ಷಲ್‌ಗಳನ್ನು ನೇಮಕ ಮಾಡಿ ಸುಮ್ಮನಾದರೆ ಸಾಲದು’ ಎಂದು ಎಂದು ಹೇಳಿತು.

‘ಮಾರ್ಷಲ್‌ಗಳು ಹೆಚ್ಚಿನೆ ಹೊರೆ ಅನುಭವಿಸುತ್ತಿದ್ದಾರೆ. 1.30 ಕೋಟಿ ಜನಸಂಖ್ಯೆ ಇರುವ ಇಡೀ ಬೆಂಗಳೂರನ್ನು 198 ಮಾರ್ಷಲ್‌ಗಳು ನಿಭಾಯಿಸಲು ಆಗುವುದಿಲ್ಲ. ಈ ನಿಯಮಗಳನ್ನು ಜಾರಿಗೊಳಿಸುವ ಉದ್ದೇಶಕ್ಕೆ ಮೀಸಲಾದ ತಂಡವೊಂದನ್ನು ರಚಿಸಬೇಕು’ ಎಂದು ತಿಳಿಸಿತು.

ರ್‍ಯಾಲಿ ಮತ್ತು ಪ್ರತಿಭಟನೆಗಳನ್ನು ನಡೆಸಲು ಅನುಮತಿ ನೀಡುವಾಗ ನಿರ್ದಿಷ್ಟ ಷರತ್ತುಗಳನ್ನು ವಿಧಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ನ.5ಕ್ಕೆ ಮುಂದೂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು