ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಲಹಂಕ: ಬಾಗಲೂರು ಗ್ರಾ.ಪಂ ಅಧ್ಯಕ್ಷರ ಚುನಾವಣೆಗೆ ತಡೆಯಾಜ್ಞೆ

Published 14 ಡಿಸೆಂಬರ್ 2023, 15:26 IST
Last Updated 14 ಡಿಸೆಂಬರ್ 2023, 15:26 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬಾಗಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕಾಗಿ ಮಂಗಳವಾರ ನಡೆಯಬೇಕಾಗಿದ್ದ ಚುನಾವಣಾ ಪ್ರಕ್ರಿಯೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆಯಿಂದಾಗಿ ರದ್ದುಗೊಂಡಿದೆ.

ಬಾಗಲೂರು ಗ್ರಾಮ ಪಂಚಾಯಿತಿಯ ಒಟ್ಟು 26 ಸದಸ್ಯರಲ್ಲಿ 21 ಸದಸ್ಯರು ಅಧ್ಯಕ್ಷರಾಗಿದ್ದ ರೀತಿ ಜೆ. ಮುನೇಗೌಡ ಅವರ ವಿರುದ್ಧ ಡಿ.7ರಂದು ಅವಿಶ್ವಾಸ ನಿರ್ಣಯ ಮಂಡಿಸಿ, ಹೊಸ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಡಿ.12ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ನಡೆಯಬೇಕಾಗಿತ್ತು.

ರೀತಿ ಮುನೇಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರಿಂದ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಗೆ ಹೈಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT