ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ವಾಸ ಆರೋಪ ಬಾಂಗ್ಲಾ ಮಹಿಳೆಗೆ ಜಾಮೀನು

Last Updated 29 ಜನವರಿ 2020, 6:23 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮ ವಾಗಿ ನೆಲೆಸಿದ್ದ ಆರೋಪದಡಿ ಬಂಧನದಲ್ಲಿದ್ದ ಬಾಂಗ್ಲಾದೇಶದ ಮಹಿಳೆಯೊಬ್ಬರಿಗೆ ಹೈಕೋರ್ಟ್‌, ಪೌರತ್ವ (ತಿದ್ದುಪಡಿ) ಕಾಯ್ದೆ ಆಧರಿಸಿ ಹೈಕೋರ್ಟ್‌, ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತ ಅರ್ಜಿಯನ್ನು ನ್ಯಾಯ ಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ಬಾಂಗ್ಲಾ ದೇಶದ ಕ್ರೈಸ್ತ ಮಹಿಳೆ ಅರ್ಚನಾ ಪೂರ್ಣಿಮಾ ಪ್ರಮಾಣಿಕ್‌ (37) ಅವರಿಗೆ ಜಾಮೀನು ನೀಡಿದೆ.

‘2014ರ ಡಿಸೆಂಬರ್ 31ರ ನಂತರ ಅಥವಾ ಅದಕ್ಕೂ ಮುನ್ನ ಭಾರತವನ್ನು ಪ್ರವೇಶಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ಅಲ್ಪಸಂಖ್ಯಾತರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲು ಆಗದು. ಮುಸ್ಲಿಮೇತರರಿಗೆ ದೇಶದ ನಾಗರಿಕರಾಗಲು ಪೌರತ್ವ (ತಿದ್ದುಪಡಿ) ಕಾಯ್ದೆ–2019ರ ಕಲಂ 2ರ ಅಡಿ ಅವಕಾಶ ನೀಡಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT