ವೃಷಭಾವತಿ ತಿರುವು ಯೋಜನೆ ಕಾಮಗಾರಿಗೆ ತಡೆ

ಬೆಂಗಳೂರು: ವೃಷಭಾವತಿ ನದಿ ತಿರುವು ಯೋಜನೆಯ ಎಲ್ಲಾ ಕಾಮಗಾರಿಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ(ನೀರಿ) ತಜ್ಞರ ಅಭಿಪ್ರಾಯ ಪಡೆಯಲು ಕಾವೇರಿ ನೀರಾವರಿ ನಿಗಮ ಮತ್ತು ರಾಜ್ಯ ಸರ್ಕಾರ ಸಿದ್ಧವಿದೆಯೇ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚಿಸಿದೆ.
‘ಯಾವುದೇ ವೈಜ್ಞಾನಿಕ ಅಧ್ಯಯನ ಇಲ್ಲದೆ ಈ ಯೋಜನೆಗೆ 2018ರ ನವೆಂಬರ್ 23ರಲ್ಲಿ ಸರ್ಕಾರ ₹110 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಯೋಜನೆಯಿಂದ ಕೆರೆಯ ವ್ಯಾಪ್ತಿ ಕುಗ್ಗಲಿದೆ. ಅಲ್ಲದೇ ವೃಷಭಾವತಿ ನದಿಯನ್ನು ಇನ್ನಷ್ಟು ಕಲುಷಿತಗೊಳಿಸಲಿದೆ. ಕೆರೆ ನಂಬಿಕೊಂಡಿರುವ ನೀರಾವರಿ ಪ್ರದೇಶದ ರೈತರು ತೊಂದರೆಗೆ ಸಿಲುಕಲಿದ್ದಾರೆ’ ಎಂದು ಅರ್ಜಿದಾರರು ದೂರಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.