ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಗೆಶನಿವಾರ ಅನಿರೀಕ್ಷಿತ ಭೇಟಿ ನೀಡಿ ಕುಂದು–ಕೊರತೆ ಪರಿಶೀಲಿಸಿದರು.

ಆಸ್ಪತ್ರೆಯಲ್ಲಿನ ಚಿಕಿತ್ಸೆಯ ಅವ್ಯವಸ್ಥೆ, ರೋಗಿಗಳಿಗೆ ನೀಡಲಾಗುವ ಸೌಲಭ್ಯಗಳು, ವಿಶೇಷವಾಗಿ ಆ್ಯಸಿಡ್ ದಾಳಿಗೊಳಗಾದವರ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪ್ರಾಧಿಕಾರಕ್ಕೆ ಬಂದಿದ್ದ ದೂರುಗಳನ್ನು ಆಧರಿಸಿ ದಿಢೀರ್ ಭೇಟಿ ನೀಡಿದ್ದರು.

ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿದ ಅವರು, ರೋಗಿಗಳ ಯೋಗಕ್ಷೇಮ, ಅವರಿಗೆ ಸಿಗುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಧೈರ್ಯ ತುಂಬಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.