ಬುಧವಾರ, ಆಗಸ್ಟ್ 21, 2019
22 °C

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: 25 ವರ್ಷಗಳ ಜೀವಾವಧಿ ಶಿಕ್ಷೆ

Published:
Updated:

ಬೆಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಮಾರ್ಪಾಡು ಮಾಡಿದೆ. ‘ಅಪರಾಧಿ 25 ವರ್ಷಗಳವರೆಗೆ ಜೈಲಿನಲ್ಲಿದ್ದು ಬಿಡುಗಡೆಗೆ ಅವಕಾಶವಿಲ್ಲದಂತೆ ಶಿಕ್ಷೆ ಅನುಭವಿಸಬೇಕು’ ಎಂದು ತೀರ್ಪು ನೀಡಿದೆ.

ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಎಚ್.ಪಿ.ಸಂದೇಶ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪನ್ನು ಶುಕ್ರವಾರ ಪ್ರಕಟಿಸಿದೆ.

ಪ್ರಕರಣವೇನು?: 2012ರ ಆಗಸ್ಟ್‌ 15ರಂದು ರಾಮನಗರ ಜಿಲ್ಲೆಯ ತಾವರೆಕರೆಯಲ್ಲಿ 9 ವರ್ಷದ ಬಾಲಕಿ ಮೇಲೆ ಸಲೀಂ ಎಂಬಾತ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ.  ‌

ಪ್ರಕರಣದ ವಿಚಾರಣೆ ನಡೆಸಿದ್ದ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಸಲೀಂಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಈ ಆದೇಶ ರದ್ದುಗೊಳಿಸುವಂತೆ ಕೋರಿ ಸಲೀಂ ಹೈಕೋರ್ಟ್‌ ಮೆಟ್ಟಿಲೇರಿದ್ದ.

Post Comments (+)