ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನಿವೃತ್ತಿ

Last Updated 19 ಮೇ 2020, 16:47 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಂಗಳವಾರ ಕರ್ತವ್ಯದಿಂದ ನಿವೃತ್ತಿಯಾದರು.

ಹೈಕೋರ್ಟ್‌ನ ಕೋರ್ಟ್ ಹಾಲ್ ಒಂದರಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಸೇರಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್‌ಗಳು, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಮತ್ತು ವಕೀಲರ ವೃಂದದಿಂದ ಫಣೀಂದ್ರ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಬೆಂಗಳೂರು ವಕೀಲರ ಸಂಘದಿಂದಲೂ ಪ್ರತ್ಯೇಕ ಸಮಾರಂಭದಲ್ಲಿ ಬೀಳ್ಕೊಡುಗೆ ನೀಡಲಾಯಿತು.

ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಂಜಾಚಿ ಶಿವಮೂರ್ತಿ ಫಣೀಂದ್ರ ಅವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಉತ್ತಮ ಶಾಸ್ತೀಯ ಸಂಗೀತಕಾರರೂ ಆದ ಫಣೀಂದ್ರ ಅವರು 1985ರಲ್ಲಿ ತುಮಕೂರಿನಲ್ಲಿ ವಕೀಲಿಕೆ ಆರಂಭಿಸಿದರು.
1998ರ ಜೂನ್ 17ರಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡರು. ಬೆಂಗಳೂರು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ, ಹಾವೇರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ್ದಾರೆ.

2013ರ ಅಕ್ಟೋಬರ್ 24 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ತಮ್ಮ ಏಳು ವರ್ಷದ ಅವಧಿಯಲ್ಲಿ ಸಮಯದಲ್ಲಿ 13 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು, ಹಲವು ಮಹತ್ವದ ತೀರ್ಪುಗಳನ್ನು ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT