ಗುರುವಾರ , ಮೇ 6, 2021
22 °C
ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ ಹೈಕೋರ್ಟ್ ನಿರ್ದೇಶನ

‘ಚಿಕಿತ್ಸೆ ನಿರಕಾರಣೆ: ದೂರು ದಾಖಲಿಸುವ ಕಾರ್ಯ ವಿಧಾನ ವಿವರಿಸಿ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈಕೋರ್ಟ್

ಬೆಂಗಳೂರು: ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಂತ್ರಸ್ತರು ದೂರು ದಾಖಲಿಸುವ ಕಾರ್ಯ ವಿಧಾನಗಳ ಬಗ್ಗೆ ವಿವರ ಸಲ್ಲಿಸುವಂತೆ ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.

‘ಈ ಸಂಬಂಧ ನಾಗರಿಕರಿಗೆ ಯಾವುದೇ ಸಹಾಯವಾಣಿ ಸಂಖ್ಯೆ ಲಭ್ಯವಿದೆಯೇ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಕೇಳಿತು.

‘ಸೋಂಕಿತರಲ್ಲದ ರೋಗಿಗಳು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು ತಕ್ಷಣದ ವೈದ್ಯಕೀಯ ನೆರವು ಪಡೆಯಲು ಆಗುತ್ತಿಲ್ಲ’ ಎಂದು ವಕೀಲ ಎಲ್. ರಮೇಶ್‌ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪೀಠ ವಿಚಾರಣೆ ನಡೆಸಿತು. 

‘ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ವೈದ್ಯಕೀಯ ಪರಿಷತ್ತಿನ ಪರ ವಕೀಲರು ತಿಳಿಸಿದರು. ‘ದೂರು ನೀಡಲು ಇರುವ ಕಾರ್ಯ ವಿಧಾನಗಳ ಬಗ್ಗೆ ವರದಿ ಸಲ್ಲಿಸಿ’ ಎಂದು ಪೀಠ ಹೇಳಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು