ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌. ಮೂರ್ತಿ ಮೇಲ್ಮನವಿ ವಿಚಾರಣೆ ಮುಂದಕ್ಕೆ

ತಿದ್ದುಪಡಿ ಕೋರಿಕೆಗೆ ಹೈಕೋರ್ಟ್‌ ಸಮ್ಮತಿ
Last Updated 10 ಜುಲೈ 2019, 19:50 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್‌.ಮೂರ್ತಿ ಅವರ ಮೇಲ್ಮನವಿ ತಿದ್ದುಪಡಿ ಕೋರಿಕೆಗೆ ಹೈಕೋರ್ಟ್‌ ಸಮ್ಮತಿಸಿದೆ.

‘ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು’ ಎಂಬ ಎಸ್.ಮೂರ್ತಿ ಅವರ ಕೋರಿಕೆಯನ್ನು ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿತ್ತು.

ಈ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮೂರ್ತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ‘ಮೂಲ ಅರ್ಜಿ ತಿದ್ದುಪಡಿಗೆ ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಕಾಲಾವಕಾಶ ನೀಡಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದೆ.

ಪ್ರಕರಣವೇನು?: ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್. ಮೂರ್ತಿಯವರನ್ನು 2018ರ ಡಿಸೆಂಬರ್‌ 27ರಂದು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.

‘2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT