ಹೆಲ್ತ್ ಸೂಪರ್‌ವೈಸರ್ ಹುದ್ದೆ: ಪರಿಗಣನೆಗೆ ನಿರ್ದೇಶನ

7

ಹೆಲ್ತ್ ಸೂಪರ್‌ವೈಸರ್ ಹುದ್ದೆ: ಪರಿಗಣನೆಗೆ ನಿರ್ದೇಶನ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸದಾಗಿ 30 ಹೆಲ್ತ್ ಸೂಪರ್‌ವೈಸರ್ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಮೂರು ತಿಂಗಳಲ್ಲಿ ಪರಿಗಣಿಸಿ’ ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಪಾಲಿಕೆಯ ಹಿರಿಯ ಆರೋಗ್ಯ ಪರಿವೀಕ್ಷಕಿ ಆರ್.ರೇಣುಕಾಂಬ, ಸಂತೋಷ್‌ ಕುಮಾರ್ ನಾಯಕ್‌ ಮತ್ತು ನಲ್ಲಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗುರುವಾರ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವಿ.ಶ್ರೀನಿವಾಸ್ ವಾದ ಮಂಡಿಸಿ, ‘ಪಾಲಿಕೆಯಲ್ಲಿ 30 ವರ್ಷಗಳಿಂದ ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ಬಡ್ತಿ ನೀಡಿಲ್ಲ. 2016ರ ಡಿಸೆಂಬರ್ 14ರಂದು 30 ಹೊಸ ಹೆಲ್ತ್ ಸೂಪರ್‌ವೈಸರ್ ಹುದ್ದೆಗಳನ್ನು ಸೃಷ್ಟಿಸುವ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿಕೊಡಲಾಗಿತ್ತು. ಆದರೆ, ಸರ್ಕಾರ ಈವರೆಗೆ ಆ ಪ್ರಸ್ತಾವನೆಗೆ ಅನುಮೋದನೆ ನೀಡಿಲ್ಲ’ ಎಂದು ಆಕ್ಷೇಪಿಸಿದರು. ಇದಕ್ಕೆ ಉತ್ತರಿಸಿದ ಸರ್ಕಾರಿ ವಕೀಲರು, ‘ಪ್ರಸ್ತಾವನೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲು ಮೂರು ತಿಂಗಳು ಕಾಲಾವಕಾಶ ಬೇಕಿದೆ’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ‘ಹೊಸ ಹುದ್ದೆಗಳ ಸೃಷ್ಟಿ ಬಗ್ಗೆ ಬಿಬಿಎಂಪಿ ಹಾಗೂ ಅರ್ಜಿದಾರರೂ ಸಲ್ಲಿಸಿರುವ ಪ್ರತ್ಯೇಕ ಮನವಿಗಳನ್ನು ನಗರಾಭಿವೃದ್ಧಿ ಇಲಾಖೆಯು ಮೂರು ತಿಂಗಳಲ್ಲಿ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು’ ಎಂದು ಆದೇಶಿಸಿದೆ.

‘ಕೆರೆಗಳಿಗೆ ತ್ಯಾಜ್ಯ ನೀರು ಬಿಡುವುದು ನಿಲ್ಲಿಸಬೇಕು’‌
ಬೆಂಗಳೂರು:
ಕೆಸಿ ವ್ಯಾಲಿ ಹಾಗೂ ಎಚ್‍ಎನ್ ವ್ಯಾಲಿ ಯೋಜನೆ ಮೂಲಕ ಬಿಡಲಾಗುತ್ತಿರುವ ನೀರು ಸುರಕ್ಷಿತವಾಗಿಲ್ಲ. ಆದ್ದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಾಯಿಸಿದೆ.

ಬೆಂಗಳೂರಿನ ತ್ಯಾಜ್ಯ ನೀರನ್ನು ಯಾವುದೇ ಸುರಕ್ಷತಾ ಅಧ್ಯಯನಕ್ಕೆ ಒಳಪಡಿಸದೆ ಕೋಲಾರದ ಕೆರೆಗಳಿಗೆ ಹರಿಲಾಸಗುತ್ತಿದೆ’ ಎಂದು ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಈ ಬಗ್ಗೆ ಈಗಾಗಲೇ ಹೈಕೋರ್ಟ್ ಮೊರೆ ಹೋಗಿದ್ದು, ನಮ್ಮ ಮನವಿಗೆ ಸ್ಪಂದಿಸಿದೆ. ಸಂಬಂಧಪಟ್ಟ ಇಲಾಖೆಗಳಿಗೆ ನೀರು ಸಂಸ್ಕರಿಸಿದ ದಾಖಲೆ ನೀಡುವಂತೆ ಹೇಳಿದ್ದು, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ.

ಇದೀಗ ಬರಪೀಡಿತ ಜಿಲ್ಲೆಗಳ ಪರಿಸ್ಥಿತಿ ಅರಿತಿರುವ ಸರ್ಕಾರ ಜೂ.2ರಿಂದ ತ್ಯಾಜ್ಯ ನೀರನ್ನು ಸಂಸ್ಕರಿಸದೆ ಕೆ.ಸಿ ವ್ಯಾಲಿಯ ಮೂಲಕ ನರಸಾಪುರ ಹಾಗೂ ಲಕ್ಷ್ಮೀಸಾಗರ ಕೆರೆಗಳಿಗೆ ಹರಿಸಲಾಗಿದೆ. ಪ್ರಸ್ತುತ ಉದ್ದನಹಳ್ಳಿ ಕೆರೆಗೆ ನೀರು ಹರಿಸಲು ಮುಂದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !