ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಜುನಾಥ್‌ ಪ್ರಸಾದ್‌ಗೆ ಷೋಕಾಸ್‌ ನೋಟಿಸ್‌

ಶನಿ ದೇವಾಲಯ ತೆರವು ಕೋರಿದ ಪ್ರಕರಣ
Last Updated 27 ಸೆಪ್ಟೆಂಬರ್ 2019, 20:24 IST
ಅಕ್ಷರ ಗಾತ್ರ

ಬೆಂಗಳೂರು: ‘ಮೆಜೆಸ್ಟಿಕ್ ಸಮೀಪದ ಓಕಳೀಪುರಂ ಜಂಕ್ಷನ್‌ ಬಳಿಯ ಶನಿಮಹಾತ್ಮ ದೇವಾಲಯ ತೆರವಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು ತಪ್ಪು ಮಾಹಿತಿ ನೀಡಿದ್ದು, ಅವರ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ಈ ಸಂಬಂಧ ಮತ್ತೀಕೆರೆಯ ನಿವಾಸಿ ಕೆ.ಎಸ್.ಸುಬ್ರಮಣ್ಯನ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ದೇವಾಲಯ ಇರುವ ಸ್ಥಳದ ಉಸ್ತುವಾರಿಯನ್ನು ರೈಲ್ವೆ ಇಲಾಖೆ ಈಗಾಗಲೇ ಬಿಬಿಎಂಪಿಗೆ ವಹಿಸಿದೆ. ಆದರೂ, ಈ ಹಿಂದಿನ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಈ ಕುರಿತು ಹೈಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ಪ್ರಶ್ನಿಸಿರುವ ಪೀಠ, ಷೋಕಾಸ್‌ನೋಟಿಸ್ ಜಾರಿಗೆ ಆದೇಶಿಸಿದೆ. ವಿಚಾರಣೆಯನ್ನು ಅಕ್ಟೋಬರ್‌ 9ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT