ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಾನ್ಸ್‌ಫಾರ್ಮರ್‌ ತೆರವು ಸರ್ಕಾರಕ್ಕೆ ನೋಟಿಸ್‌

Last Updated 12 ಮಾರ್ಚ್ 2020, 22:31 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ ತೆರವುಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ನಿವೃತ್ತ ವಿಂಗ್ ಕಮಾಂಡರ್‌ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ಅಶೋಕ್‌ ಎಸ್.ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬಿಬಿಎಂಪಿ ಆಯುಕ್ತರು ಮತ್ತು ಬಿಎಂಟಿಎಫ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಕೋರಿಕೆ ಏನು?: ‘ಪಾದಚಾರಿ ಮಾರ್ಗಗಳನ್ನು ಅಕ್ರಮಿಸಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ವಿದ್ಯುತ್‌ ಸೋರಿಕೆಯಾಗಿ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಾಲಾ ಮಕ್ಕಳು, ವೃದ್ಧರು ಮತ್ತು ಅಮಾಯಕ ಪಾದಚಾರಿಗಳು ಅಪಾಯಕ್ಕೆ ತುತ್ತಾಗಬಲ್ಲರು. ಹೈವೋಲ್ಟೇಜ್‌ ಹೊಂದಿದ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಮಳೆಗಾಲದ ದಿನಗಳಲ್ಲೇನಾದರೂ ವಿದ್ಯುತ್‌ ಸೋರಿಕೆಯಾದರೆ ಮತ್ತು ಅವುಗಳನ್ನು ಯಾರಾದರೂ ಸ್ಪರ್ಶಿಸಿದರೆ ಪ್ರಾಣಾಪಾಯದ ಭೀತಿ ಇರುತ್ತದೆ’ ಎಂಬುದು ಅರ್ಜಿದಾರರ ಅಳಲು.

‘ಪಾದಚಾರಿ ಮಾರ್ಗ ಮತ್ತು ರಾಜಕಾಲುವೆ ಮೇಲಿನ ಟ್ರಾನ್ಸ್‌ಫಾರ್ಮರ್‌ಗಳನ್ನು ನಿಗದಿತ ಸಮಯದೊಳಗೆ ಸ್ಥಳಾಂತರಗೊಳಿಸಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಗೆ (ಬೆಸ್ಕಾಂ) ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ. ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT