ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟ್ರೋಲ್‌ ಮಗಾ’: ಸರ್ಕಾರಕ್ಕೆ ₹ 1 ಲಕ್ಷ ದಂಡ

Last Updated 11 ಅಕ್ಟೋಬರ್ 2019, 20:23 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದಡಿ ‘ಟ್ರೋಲ್ ಮಗಾ‘ ಫೇಸ್‌ಬುಕ್ ಪುಟದ ಅಡ್ಮಿನ್ ಜಯಕಾಂತ್ ವಿರುದ್ಧ ಶ್ರಿರಾಮಪುರ ಠಾಣಾ ಪೊಲೀಸರು ದಾಖಲಿಸಿದ್ದ ಎರಡನೇ ಎಫ್‌ಐಆರ್ ರದ್ದುಪಡಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ₹ 1 ಲಕ್ಷ ದಂಡ ವಿಧಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದ್ದು, ‘ದೌರ್ಜನ್ಯಕ್ಕೆ ಸರ್ಕಾರವೇ ಹೊಣೆ. ಇದಕ್ಕೆ ಕಾರಣೀಕರ್ತರಾದ ಅಧಿಕಾರಿಗಳಿಂದ ದಂಡ ವಸೂಲಿ ಮಾಡಿ ಅದನ್ನು ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಬೇಕು’ಎಂದು ಆದೇಶಿಸಿದೆ.

‘ರಾಜ್ಯ ಪೊಲೀಸ್ ಮಹಾ ನಿರ್ದೇ ಶಕರು ಇಲಾಖಾ ವಿಚಾರಣೆ ನಡೆಸಿ ಮೂರು ತಿಂಗಳ ಒಳಗೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸಬೇಕು. ವಿಚಾರಣೆಯಲ್ಲಿ ತಪ್ಪಿತಸ್ಥ ರೆಂದು ಸಾಬೀತಾದ ಅಧಿಕಾರಿಗಳ ವೇತನದಿಂದ ₹ 1 ಲಕ್ಷ ಮೊತ್ತವನ್ನು ವಸೂಲಿ ಮಾಡಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಅರ್ಜಿದಾರನನ್ನು ಬಂಧಿಸಲೇ ಬೇಕು ಎಂಬ ಕಾರಣಕ್ಕಾಗಿ ಎರಡನೇ ಎಫ್‌ಐಆರ್ ದಾಖಲಿಸಿರುವುದು ಖಂಡ ನಾರ್ಹ. ಈ ಪ್ರಕರಣದಲ್ಲಿ ಪೊಲೀಸರು ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ನಿರ್ದಯವಾಗಿ ಉಲ್ಲಂಘಿ ಸಿದ್ದಾರೆ. ನಿರೀಕ್ಷಣಾ ಜಾಮೀನು ಹೊರ ತಾಗಿಯೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿದಾರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವುದು ಕಾನೂನುಬಾಹಿರ. ಆದ್ದರಿಂದ ತಪ್ಪೆಸಗಿದ ಪೊಲೀಸರು ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು’ ಎಂದು ನಿರ್ದೇಶಿಸಲಾಗಿದೆ.

ಜಯಕಾಂತ್‌ ಪರ ವಕೀಲ ಎಂ. ಅರುಣ ಶ್ಯಾಮ್‌ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT