ಮಂಗಳವಾರ, ಜೂನ್ 28, 2022
28 °C

ಸಿಂಧೂರಿ ನೇಮಕ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್‌ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ಆದೇಶಿಸಿದೆ.

‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿ ಆಗಿರುವ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿ ವಿಚಾರಣೆಯನ್ನು ಜೂ.14ಕ್ಕೆ ಮುಂದೂಡಿತು. ಸಿಎಟಿ ಆದೇಶ ಪ್ರಶ್ನಿಸಿ ಶರತ್ ಅವರು ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಎರಡು ಅರ್ಜಿಗಳನ್ನು ಪೀಠ ಒಟ್ಟಿಗೆ ವಿಚಾರಣೆ ನಡೆಸುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು