ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಣಿಗ ಗುರುಪೀಠ: ಹೈಕೋರ್ಟ್‌ ನೋಟಿಸ್‌

Last Updated 14 ನವೆಂಬರ್ 2022, 20:59 IST
ಅಕ್ಷರ ಗಾತ್ರ

ಬೆಂಗಳೂರು: ‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗಾಣಿಗ ಜನಾಂಗದ ಗುರುಪೀಠಕ್ಕೆ ಸರ್ಕಾರದಿಂದ ₹ 5 ಕೋಟಿ ಅನುದಾನ ನೀಡಿದ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ಗೆ ಹತ್ತು ಎಕರೆ ಜಮೀನು ಮಂಜೂರು ಮಾಡಿದ ಕ್ರಮವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ 3 ವಾರಗಳ ಒಳಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಪ್ರತಿವಾದಿ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿವಿಚಾರಣೆಯನ್ನು ಡಿ. 7ಕ್ಕೆ ಮುಂದೂಡಿದೆ.ಯಡಿಯೂರಪ್ಪ 2011ರ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಗಾಣಿಗ ಜನಾಂಗದ ಗುರುಪೀಠಕ್ಕೆ ₹ 5 ಕೋಟಿ ಮೀಸಲಿರಿಸಿದ್ದರು.

ವಿಧಾನಪರಿಷತ್ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ, ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ ನೋಂದಣಿ ಮಾಡಿಸಿ ಅದಕ್ಕೆ ಅಧ್ಯಕ್ಷರಾಗಿದ್ದರು. ಟ್ರಸ್ಟ್‌ಗೆ ಶೈಕ್ಷಣಿಕ ಉದ್ದೇಶಕ್ಕೆ ದಾಸನಪುರ ಬಳಿ 10 ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಲಾಗಿತ್ತು. ‘ಟ್ರಸ್ಟ್ ಶಿಕ್ಷಣ ಸಂಸ್ಥೆ ಹೊಂದಿರದಿದ್ದರೂ ಜಮೀನು ಮಂಜೂರಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಬೇಕು‘ ಎಂದು ಕೋರಿಮಾಹಿತಿ ಹಕ್ಕು ಕಾರ್ಯಕರ್ತ ಎನ್. ಹನುಮೇಗೌಡ ಪಿಐಎಲ್ ಸಲ್ಲಿಸಿದ್ದರು. ನ್ಯಾಯಪೀಠವು ಇದನ್ನು ಸ್ವಯಂಪ್ರೇರಿತ ಪಿಐಎಲ್ ಆಗಿ ಪರಿವರ್ತಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT