ಶನಿವಾರ, ಅಕ್ಟೋಬರ್ 24, 2020
24 °C

ಕಬ್ಬನ್ ಉದ್ಯಾನದಲ್ಲಿ ಸಂಚಾರ: ಹೈಕೋರ್ಟ್‌ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

ಕಬ್ಬನ್ ಪಾರ್ಕ್ ಪಾದಚಾರಿಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್.ಎಸ್. ಸಂಜಯಗೌಡ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

‘ಉದ್ಯಾನದೊಳಗೆ ವಾಹನ ಸಂಚಾರ ಮತ್ತು ವಾಹನ ನಿಲುಗಡೆಗೆ ಅವಕಾಶ ನೀಡದಂತೆ ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಭೂಸಾರಿಗೆ ನಿರ್ದೇಶನಾಲಯ ಸೆ‍‍ಪ್ಟೆಂಬರ್‌ 2ರಂದು ಶಿಫಾರಸು ಮಾಡಿವೆ. ಗೃಹ ಇಲಾಖೆ ಅವಸರದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ಹೇಳಿದ್ದಾರೆ.

‘ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇದ್ದ ಕಾರಣ ಕಬ್ಬನ್ ಪಾರ್ಕ್‌ನಲ್ಲಿ ಗಾಳಿ ಶುದ್ಧವಾಗಿದೆ. ಈ ನಡುವೆ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ಅವಕಾಶ ನಿರಾಕರಿಸಿ ನಗರಾಭಿವೃದ್ಧಿ ಇಲಾಖೆಯ ಶಿಫಾರಸು ಅನುಷ್ಠಾನಗೊಳಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು