ಬುಧವಾರ, ಜೂಲೈ 8, 2020
28 °C

ಕೆಲಸದ ಅವಧಿ ಹೆಚ್ಚಳ: ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿರುವುದನ್ನು ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್. ಮಾರುತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ .ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.

'ಕೆಲಸದ ಅವಧಿ ಹೆಚ್ಚಿಸುವ ತುರ್ತು ಏನಿತ್ತು, ಹೆಚ್ಚುವರಿ ಕೆಲಸದ ಅವಧಿಗೆ ಹೆಚ್ಚುವರಿ ವೇತನ ನೀಡಲಾಗುತ್ತದೆಯೇ, ಕಾರ್ಖಾನೆಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬ ಅಂಶಗಳ ಬಗ್ಗೆ ವಿವರಣೆ ನೀಡಿ' ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ.

ಜೂನ್ 5ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು