ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಸಿಐ ವಿದ್ಯಾರ್ಥಿಗಳ ಪ್ರವೇಶ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್

Last Updated 26 ಜೂನ್ 2018, 19:54 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ವಿದ್ಯಾರ್ಥಿಗಳ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಹಂಚಿಕೆಗೆ ಸಂಬಂಧಿಸಿದ ತಕರಾರಿನಲ್ಲಿ ನಿಮ್ಮ ನಿಲುವು ಏನು ಎಂಬುದನ್ನು ತಿಳಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ಕಾಲಿನ್ ಪಿ.ಮ್ಯಾಲಿಯರ್ ಸೇರಿದಂತೆ 15ಕ್ಕೂ ಹೆಚ್ಚು ಜನರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಮೊಹಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಒಸಿಐ ವಿದ್ಯಾರ್ಥಿಗಳು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಖಾಸಗಿ ಕೋಟಾದಡಿ ಸೀಟು ಪಡೆಯುವ ವ್ಯಾಪ್ತಿಗೆ ಒಳಪಡುತ್ತಾರೆಯೇ ಹೇಗೆ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ನ್ಯಾಯಪೀಠವು ಕೇಂದ್ರದ ಪರ ವಕೀಲರನ್ನು ಕೇಳಿತು.

ಅಂತೆಯೇ ಈ ಕುರಿತಂತೆ ಮುಂದಿನ ವಿಚಾರಣೆ ವೇಳೆಗೆ ನಿಮ್ಮ ನಿಲುವನ್ನು ತಿಳಿಸಿ ಎಂದು ಸಹಾಯಕ ಸಾಲಿಸಿಟರ್ ಜನರಲ್‌ ಸಿ.ಶಶಿಕಾಂತ್‌ ಅವರಿಗೆ ಸೂಚಿಸಿತು.

ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT