ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧನಕ್ಕೊಳಗಾದ ಅಕ್ರಮ ವಲಸಿಗರ ಮಕ್ಕಳಿಗೆ ತಾಣವಿಲ್ಲ: ಹೈಕೋರ್ಟ್‌

Last Updated 12 ಡಿಸೆಂಬರ್ 2019, 2:22 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿ ಬಂಧನಕ್ಕೆ ಒಳಗಾದ ವಿದೇಶಿಯರ ಮಕ್ಕಳಿಗೆ ಆಶ್ರಯ ಕಲ್ಪಿಸಲು ಯಾವುದೇ ವಿಶೇಷ ಸಂರಕ್ಷಣಾ ಕೇಂದ್ರಗಳನ್ನು ಸ್ಥಾಪಿಸಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ ಆರೋಪದಡಿ ಬಂಧನದಲ್ಲಿರುವ ಬಾಂಗ್ಲಾದ ಬಾಬುಲ್ ಖಾನ್ ಹಾಗೂ ಮೊಹಮದ್ ಆರೀಫ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರಸನ್ನ ದೇಶಪಾಂಡೆ, ಈ ಕುರಿತು ರಾಜ್ಯ ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ನೀಡಿದ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.

ಅಂತೆಯೇ ರಾಜ್ಯ ಬಾಲ ಮಂದಿರದಲ್ಲಿರುವ ವಿದೇಶಿ ಪ್ರಜೆಗಳ ಮಕ್ಕಳ ಪಟ್ಟಿಯನ್ನೂ ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಗುರುವಾರಕ್ಕೆ (ಡಿ.12) ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT